HomeLatest Newsಪೋಷಕರಿಗೆ ಆತಂಕ ಬೇಡ: ಮಕ್ಕಳ ಸಾವಿಗೆ ಕಾರಣವಾದ ಸಿರಪ್ ರಾಜ್ಯದಲ್ಲಿ ಪೂರೈಕೆಯಾಗಿಲ್ಲ: ಸಚಿವ ದಿನೇಶ್ ಗುಂಡೂರಾವ್...

ಪೋಷಕರಿಗೆ ಆತಂಕ ಬೇಡ: ಮಕ್ಕಳ ಸಾವಿಗೆ ಕಾರಣವಾದ ಸಿರಪ್ ರಾಜ್ಯದಲ್ಲಿ ಪೂರೈಕೆಯಾಗಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಪೂರೈಕೆಯಾಗಿಲ್ಲ. ಈಗಾಗಲೇ ನಮ್ಮ ಇಲಾಖೆ ಈ ಬಗ್ಗೆ ನಿಗಾ ವಹಿಸಿದ್ದು, ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ತಮಿಳುನಾಡು, ಪುದುಚೇರಿ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಅಲ್ಲಿನ ಭಾಗಗಳಲ್ಲಿ ಈ ಕಂಪನಿಯ ಸಿರಪ್ ಬಳಕೆಯಲ್ಲಿದ್ದು, ದುರ್ಘಟನೆ ಸಂಭವಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಇತರ ಕೆಮ್ಮಿನ ಸಿರಪ್‌ಗಳ ಮಾದರಿಗಳ ಪರೀಕ್ಷೆಯನ್ನು ಆರಂಭಿಸಲಾಗಿದೆ. ಇನ್ನೆರಡು ದಿನಗಳಲ್ಲಿ ವರದಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular