ಬೆಂಗಳೂರು: ‘ಬಿಗ್ ಬಾಸ್’ ಮನೆಯಲ್ಲಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದೆ.
ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಹೌಸ್ ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ.
ಬಿಗ್ ಬಾಸ್ ಮನೆಯಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಲೀಟರ್ ನೀರು ಬಳಕೆ ಮಾಡುತ್ತಿದ್ದು, ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡದ ಕಾರಣಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದೆ. ಬಿಗ್ ಬಾಸ್ ಹೌಸ್ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.