ಗದಗ: ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಡಿ ಮೂಲದ ಕುರಿಗಾಹಿ ಪದ್ಮಣ್ಣ ಅವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದಲ್ಲಿ ಕುರಿಗಳನ್ನು ಮೇಯಿಸಲಾಗಿದ್ದು, ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಶಿರಹಟ್ಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.