ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. 131 ಇನ್ ಸ್ಪೆಕ್ಟರ್ ಹಾಗೂ 27 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎರಡನೇ ಬಾರಿಗೆ ಇನ್ ಸ್ಪೆಕ್ಟರ್ ಹಾಗೂ ಡಿವೈಎಸ್ಪಿಗಳ ಸಾಮೂಹಿಕ ವರ್ಗಾವಣೆಗೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಕಳೆದ ಬಾರಿ ಪೊಲೀಸ್ ವರ್ಗಾವಣೆ ವಿಚಾರವಾಗಿ ಆಡಳಿತ ಪಕ್ಷದಲ್ಲಿ ದೊಡ್ಡ ಮಟ್ಟದ ಭಿನ್ನಾಭಿಪ್ರಾಯ ಉಂಟಾಗಿತ್ತು. ಪಟ್ಟಿಯನ್ನು ಎರಡು ಮೂರು ಬಾರಿ ಪರಿಷ್ಕರಣೆ ಮಾಡಿದ್ದು, ಇದೀಗ ಮತ್ತೊಮ್ಮೆ ವರ್ಗ 131 ಇನ್ ಸ್ಪೆಕ್ಟರ್, 27 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಆದೇಶಿಸಿದ್ದಾರೆ.