ಬೆಂಗಳೂರು : ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಪೂರೈಕೆಯಾಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಪೂರೈಕೆಯಾಗಿಲ್ಲ ಈಗಾಗಲೇ ನಮ್ಮ ಇಲಾಖೆ ಈ ಬಗ್ಗೆ ನಿಗಾ ವಹಿಸಿದ್ದು, ಪೋಷಕರು ಆತಂಕಪಡುವ ಅಗತ್ಯವಿಲ್ಲ. ತಮಿಳುನಾಡು, ಪುದುಚೇರಿ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಅಲ್ಲಿನ ಭಾಗಗಳಲ್ಲಿ ಈ ಕಂಪನಿಯ ಸಿರಪ್ ಬಳಕೆಯಲ್ಲಿದ್ದು, ದುರ್ಘಟನೆ ಸಂಭವಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಇತರ ಕೆಮ್ಮಿನ ಸಿರಪ್ಗಳ ಮಾದರಿಗಳ ಪರೀಕ್ಷೆಯನ್ನು ಆರಂಭಿಸಲಾಗಿದೆ. ಇನ್ನೆರಡು ದಿನಗಳಲ್ಲಿ ವರದಿ ಸಿಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

