ದಾವಣಗೆರೆ: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯ ಮುಂದುವರೆದಿದ್ದು, ದಾವಣಗೆರೆ ತಾಲೂಕಿನ ಹಳೆಕಡ್ಲೆಬಾಳು ಬಳಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕ ಹೃದಯಾಘಾತಕ್ಕೆ ಒಳಗಾಗಿದ್ದಾರೆ.
ಪ್ರಕಾಶ್ ನಾಯಕ್(44) ಸಮೀಕ್ಷೆ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಕೂಡಲೇ ಸ್ಥಳೀಯರ ನೆರವಿನಿಂದ ಅವರನ್ನು ದಾವಣಗೆರೆಯ ಹೈಟೆಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಸ್ಟೆಂಟ್ ಅಳವಡಿಸಿ ಶಸ್ತ್ರಚಿಕಿತ್ಸೆ ನೆರವೇರಿಸಿದ್ದು, ಶಿಕ್ಷಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಶಿಕ್ಷಕ ಪ್ರಕಾಶ್ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.