HomeLatest NewsRAIN ALERT: ಗುಡುಗು ಸಹಿತ ಭಾರಿ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ಗುಡುಗು ಸಹಿತ ಭಾರಿ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಅಕ್ಟೋಬರ್ 9 ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು ಸೇರಿದಂತೆ 14 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳುರು, ಚಾಮರಾಜನಗರ, ಕೊಡಗು, ಹಾಸನ, ಕೋಲಾರ,ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಧಾರವಾಡ, ಬೀದರ್, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular