ಬೆಂಗಳೂರು: ಧರ್ಮಸ್ಥಳ ಪ್ರಕರಣ, ಅನನ್ಯಾ ಭಟ್ ನಾಪತ್ತೆ ಕಟ್ಟು ಕಥೆ ಕಟ್ಟಿ ಭಾರಿ ಸುದ್ದಿಯಾಗಿದ್ದ ಸುಜಾತಾ ಭಟ್, ತಾನು ಬುರುಡೆ ಗ್ಯಾಂಗ್ ಜೊತೆ ಹೋಗಿ ತಪ್ಪು ಮಾಡಿದೆ ಎಂದು ಪಶ್ಚಾತ್ತಾಪ ಪಟ್ಟಿದ್ದಾರೆ. ಅಲ್ಲದೇ ತಾನು ಧರ್ಮಸ್ಥಳಕ್ಕೆ ಹೋಗಿ ಮಂಜುನಾಥ ಸ್ವಾಮಿ ದರ್ಶನ ಪಡೆದು ಬರುತ್ತೇನೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಗೊತ್ತಾಗದೇ ತಪ್ಪು ಮಾಡಿದೆ ಕ್ಷಮಿಸಿ ಎಂದು ಕೇಳುತ್ತೇನೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಸುಜಾತಾ ಭಟ್, ಇದೇ ವೇಳೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಹೇಳಿಕೊಂಡಿದ್ದಾರೆ. ಒಂದು ದಿನದ ಮಟ್ಟಿಗಾದರೂ ನಾನು ಬಿಗ್ ಬಾಸ್ ಮನೆಗೆ ಹೋಗಬೇಕು ಎಂಬ ಆಸೆಯಿದೆ. ಅವಕಾಶ ಸಿಗಬಹುದು ಎಂಬ ವಿಶ್ವಾಸವಿದೆ ಎಂದಿದ್ದಾರೆ.
ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ನಾನು ಬಿಗ್ ಬಾಸ್ ಮನೆಗೆ ಹೋಗುತ್ತೇನೆ. ಅವಕಾಶ ಕೊಡುತ್ತಾರೆ ಎಂಬ ಭರವಸೆಯಲ್ಲಿ ನಾನಿದ್ದೇನೆ ಎಂದು ಹೇಳಿದದರೆ.