ಕಾಸರಗೋಡು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಕಡಂಬಾರ್ ನಿವಾಸಿಗಳಾದ ಅಜಿತ್ (35) ಹಾಗೂ ಪತ್ನಿ ಶ್ವೇತಾ (27) ಎಂದು ಗುರುತಿಸಲಾಗಿದೆ. ಅಜಿತ್ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಪತ್ನಿ ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ ನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು.
ದಂಪತಿ ಏಕಾಏಕಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ಥಳೀಯ ನಿವಾಸಿಗಳು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪತಿ ಹಾಗೂ ಪತ್ನಿ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.