ಬೆಂಗಳೂರು: ಪತ್ನಿ ಶೋಲಶಂಕಿಸಿ ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಬಳಿಕ ಆಕೆಯ ಶವವನ್ನು ಸುಟ್ಟು ಹಾಕುವಾಗ ಬೆಂಕಿ ತಗುಲಿ ಆತನೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅಬ್ಬಿನಹೊಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ ಲಿಂಗರಾಜ್, ಪತ್ನಿ ಸುನಿತಾಳ ಬಗ್ಗೆ ಅನುಮಾನಗೊಂಡು ಆಕೆಯ ಕತ್ತುಹಿಸುಕಿ ಕೊಲೆಗೈದಿದ್ದಾನೆ. ಬಳಿಕ ಶವಕ್ಕೆ ಬೆಂಕಿಯಿಡುವ ವೇಳೆ ಲಿಂಗರಾಜುಗೂ ಗಂಭೀರವಾದ ಸುಟ್ಟಗಾಯಗಳಾಗಿವೆ.
ಗಾಯಾಳು ಲಿಂಗರಾಜುನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.