ಚಿಕ್ಕಮಗಳೂರು : ಶೃಂಗೇರಿಯಲ್ಲಿ 100 ಬೆಡ್ ಆಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಂದೂರಿನಲ್ಲಿ ನೂತನ 100 ಹಾಸಿಗೆಗಳ ಕಟ್ಟಡದ ಶಂಕುಸ್ಥಾಪನೆಯನ್ನು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ರವರ ಜೊತೆಗೂಡಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿದರು.
ಸುಮಾರು ರೂ. 37 ಕೋಟಿ 60 ಲಕ್ಷಗಳಲ್ಲಿ ನಿರ್ಮಾಣಗೊಳ್ಳಲಿರುವ ಈ ಸಮುದಾಯ ಆರೋಗ್ಯ ಕೇಂದ್ರ ಸುತ್ತಮುತ್ತಲಿನ ಹಲವು ಗ್ರಾಮಗಳ ಜನತೆಗೆ ಆರೋಗ್ಯ ಸೇವೆಗಳನ್ನು ಒದಗಿಸಲಿದೆ.
ಮುಂದಿನ ಆರು ತಿಂಗಳಲ್ಲಿ ಈ ಪ್ರದೇಶದಲ್ಲಿ ಹೆಚ್ಚಿನ ಮಳೆ ಇರುವುದಿಲ್ಲ. ತ್ವರಿತ ಗತಿಯಲ್ಲಿ ಕೆಲಸ ನಡೆಸಿ ಈ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚಿಸಿದರು.
ಈ ವೇಳೆ ಶೃಂಗೇರಿಯ ಶಾಸಕರಾದ ರಾಜೇಗೌಡ, ಜಿಲ್ಲಾ ಆರೋಗ್ಯಧಿಕಾರಿಗಳು, ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.