ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನನಗೂ ಸಚಿವ ಸ್ಥಾನ ಸಿಗಲಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾನೂ ಸಚಿವ ಸ್ಥಾನದ ಆಕಾಂಕ್ಷಿ. ನಾನೂ ಕೂಡ ಈ ಬಾರಿ ಸಚಿವನಾಗುತ್ತೇನೆ. ನನಗೂ ಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡುತ್ತೇನೆ. ನನಗೆ ವಿಶ್ವಾಸವಿದೆ. ನನಗೂ ಸಚಿವ ಸ್ಥಾನ ಸಿಗುತ್ತದೆ ಎಂಬುದು ನನ್ನ ಆಶಯ ಎಂದರು.
ನನ್ನ ಮೇಲೆ ತಾಯಿ ಚಾಮುಂಡಿ ದೇವಿ ಆಶಿರ್ವಾದವಿದೆ. ಸಚಿವನಾಗಿ ನಾನೂ ರಾಜಭವನಕ್ಕೆ ತೆರಳಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಹೇಳಿದರು.