HomeKarnatakaಟಿಪ್ಪರ್ ಡಿಕ್ಕಿ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಟಿಪ್ಪರ್ ಡಿಕ್ಕಿ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಸಮೀಪದ ನುಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕುಣಿಗಲ್ ತಾಲೂಕಿನ ಅಮೃತೂರು ಹೋಬಳಿಯ ಉಂಗ್ರ ಗ್ರಾಮದ ಹುಚ್ಚೇಗೌಡ(55) ಮತ್ತು ಅವರ ಮೊಮ್ಮಗ ಪ್ರೀತಮ್ ಗೌಡ(10) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಲಿಂಗಮ್ಮ ಎಂಬುವರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular