ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶಿಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ಅ. 18ರವರೆಗೆ ವಿಸ್ತರಿಸಲಾಗಿದೆ.
ಅ. 19 ಭಾನುವಾರ ರಜೆ ಇದೆ. ಅ. 20ರಿಂದ 23ರವರೆಗೆ ದೀಪಾವಳಿ ಹಬ್ಬಕ್ಕೆ ರಜೆ ಇದೆ. ಅ. 23ರಿಂದ ಶಾಲೆಗಳು ಪುನಾರಂಭವಾಗಲಿವೆ.
ಮುಖ್ಯಮಂತ್ರಿಗಳು ಇಂದು ವಿಧಾನ ಸೌಧದಲ್ಲಿ ಸನ್ಮಾನ್ಯ ಕರ್ನಾಟಕ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀಡಿದ ನಿರ್ದೇಶನಗಳು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ಅವರು ಮುಖ್ಯಮಂತ್ರಿಗಳವರಿಗೆ ನೀಡಿದ ಮನವಿ ಪತ್ರ, ದಿ: 06-10-2025 ರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ಸರ್ಕಾರ ಇವರು ನಮೂದಿಸಿದ ಟಿಪ್ಪಣಿ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಿ ಆದೇಶಿಸಲಾಗಿತ್ತು.
ಸದರಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ). ಬೆಂಗಳೂರು ರವರ ಸಮೀಕ್ಷೆಯ ಕಾರ್ಯವನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಅವಶ್ಯಕವಿದ್ದು, ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಶಾಲೆಗಳಿಗೆ ಹೆಚ್ಚುವರಿ ದಸರಾ ರಜೆಗಳನ್ನು ನೀಡಿ ಸಮೀಕ್ಷೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿರುತ್ತಾರೆ. ಹಾಗೂ ವಿದ್ಯಾರ್ಥಿಗಳಿಗೆ ಮುಂದೆ ವಿಶೇಷ ಬೋಧನಾ ಅವಧಿಗಳನ್ನು ನಡೆಸಲಾಗುವುದು ಎಂದಿರುತ್ತಾರೆ
ದಿ: 07-10-2025 ರಂದು ವಿಧಾನ ಸೌಧದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀಡಿದ ಸೂಚನೆಗಳ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಲಾಗಿದೆ:
ಬೆಂಗಳೂರು ನಗರ ಮತ್ತು ರಾಜ್ಯದ ಇತರ ಎಲ್ಲ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಪೂರ್ಣಗೊಳಿಸುವುದಕ್ಕೆ ರಾಜ್ಯದ ರಾಜ್ಯ ಪಠ್ಯಕ್ರಮದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ದಿನಾಂಕ 18-10-2017 ರ ವರೆಗೆ ವಿಸ್ತರಿಸಲಾಗಿದೆ.
ಶಿಕ್ಷಕರು ಸಮೀಕ್ಷೆ ಕಾರ್ಯವನ್ನು ದಿ: 19-10 2025 ರೊಳಗೆ ಪೂರ್ಣಗೊಳಿಸಬೇಕು. ಅವಧಿಯಲ್ಲಿ ಮಕ್ಕಳ ಕಲಿಕೆಗೆ ಉಂಟಾಗುವ ಕೊರತೆಯ ಅವಧಿಯನ್ನು ರಜಾ ದಿನಗಳ ನಂತರ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸುವುದು.
12 10 2025 ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಮಧ್ಯಾವಧಿ ವರೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡ ಉಪನ್ಯಾಸಕರನ್ನು ಸಮೀಕ್ಷಾ ಕಾರ್ಯದಿಂದ ಬಿಡುಗಡೆಗೊಳಿಸುವುದು.
ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯ ನಿರ್ವಹಿಸುವುದು.
ವಿಶೇಷ ಸೂಚನೆ: ಕಾಲಕಾಲಕ್ಕೆ, ಸರ್ಕಾರದಿಂದ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.


ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಚರ್ಚಿಸಿದೆ.
— Siddaramaiah (@siddaramaiah) October 7, 2025
ಸಭೆಯಲ್ಲಿ ನನ್ನ ಮಾತುಗಳು ಸಾರಾಂಶ;
ಸೆಪ್ಟೆಂಬರ್ 22 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇಂದು ಮುಗಿಯಬೇಕಿತ್ತು. ಕೆಲವು…