BIG NEWS : ನಾಳೆ ಶಕ್ತಿ ದೇವತೆ ‘ಹಾಸನಾಂಬೆ’ ದೇವಾಲಯದ ಬಾಗಿಲು ಓಪನ್, ಪಾಸ್ ದರ ಎಷ್ಟು ತಿಳಿಯಿರಿ.!

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದ ಬಾಗಿಲು ನಾಳೆ ಓಪನ್ ಆಗಲಿದೆ . ಈಗಾಗಲೇ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ ನಡೆದಿದೆ.

ಅ. 9ರಂದು ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿಯ ಬಾಗಿಲು ತೆರೆಯಲಿದ್ದು, ಅಕ್ಟೋಬರ್ 23ರಂದು ಮುಚ್ಚಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಸಿದ್ಧತೆಗೆ ಸೂಚನೆ ನೀಡಿದ್ದು, ದೇವಸ್ಥಾನಕ್ಕೆ ಬಣ್ಣ ಹಚ್ಚುವ ಕಾರ್ಯ ಪೂರ್ಣಗೊಂಡಿದೆ.

ಹಾಸನ ನಗರದಲ್ಲಿ ಸ್ವಾಗತ ಕಮಾನು, ಲೈಟಿಂಗ್ಸ್, ಎಲ್ಇಡಿ ಅಳವಡಿಕೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಭಕ್ತರಿಗೆ ಅನುಕೂಲ ಕಲ್ಪಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಕಳೆದ ಬಾರಿ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬ ದೇವಿಯ ದರ್ಶನ ಪಡೆದಿದ್ದು, ಈ ಬಾರಿ ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾಗದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಿಶೇಷ ದರ್ಶನಕ್ಕೆ 300 ರೂ., 1000 ರೂ. ಪಾಸ್ ವ್ಯವಸ್ಥೆ ಮಾಡಲಾಗಿದೆ. ವಿಐಪಿ, ವಿವಿಐಪಿ ಪಾಸ್ ರದ್ದು ಮಾಡಿದ್ದು, ಗೋಲ್ಡ್ ಪಾಸ್ ಜಾರಿಗೆ ತರಲಾಗಿದೆ. ಒಂದು ಪಾಸ್ ಗೆ ಒಬ್ಬರಿಗೆ ಮಾತ್ರ ಅವಕಾಶವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read