ಬೆಂಗಳೂರು: ವಾಲ್ಮೀಕಿ ಜೀವನ ಚರಿತ್ರೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಾಲ್ಮೀಕಿ ಜಯಂತಿ ಪ್ರಯುಕ್ತ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಮೊದಲು ಮಾತನಾಡಿದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು, ವಾಲ್ಮೀಕಿ ಜೀವನ ಚರಿತ್ರೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಭಾಷಣದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ, ಪಠ್ಯದಲ್ಲಿ ವಾಲ್ಮೀಕಿ ಜೀವನ ಚರಿತ್ರೆ ಮತ್ತು ರಾಮಾಯಣ ಸೇರಿಸುವುದಾಗಿ ಭರವಸೆ ನೀಡಿದ್ದಾರೆ.
ಪರಿಶಿಷ್ಟ ಜಾತಿ ಪಂಗಡದವರಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿಗೆ ಬಜೆಟ್ ನಲ್ಲಿ ಹಣ ಮೀಸಲಿಡಲು ಕಾಯಿದೆ ರೂಪಿಸಿದ್ದು ಕಾಂಗ್ರೆಸ್ ಸರ್ಕಾರ. ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಯಾರು ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ಗಟ್ಟಿಯಾಗಿ ನಿಲ್ಲಬೇಕೆಂದು ಸಿಎಂ ಮನವಿ ಮಾಡಿದ್ದಾರೆ.
ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ಐದು ಲಕ್ಷ ನಗದು, ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಲಾಯಿತು.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಐವರು ಗಣ್ಯರಿಗೆ 2025ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ, ಗೌರವಿಸಿದೆ.
— Siddaramaiah (@siddaramaiah) October 7, 2025
ಈ ಎಲ್ಲ ಸಾಧಕರ ಜೀವನ ಸಾಧನೆಗಳು ಸಮಾಜಕ್ಕೆ ಮಾದರಿಯಾಗಲಿ ಎಂದು ಆಶಿಸುತ್ತೇನೆ. pic.twitter.com/TtBzgtRSYC