ಬೆಂಗಳೂರು: ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ‘ಬಿಗ್ ಬಾಸ್’ ರಿಯಾಲಿಟಿ ಶೋ ಬಂದ್ ಮಾಡಿಸಿ ಕಲಾವಿದರ ಮೇಲೆ ನಟ್ಟು ಬೋಲ್ಟು ಮಿನಿಸ್ಟರ್ ಡಿ.ಕೆ. ಶಿವಕುಮಾರ್ ಸೇಡು ತೀರಿಸಿಕೊಂಡಿದ್ದಾರೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
‘ಬಿಗ್ ಬಾಸ್’ ಸೀಸನ್ 12 ನಡೆಯುತ್ತಿದ್ದ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿದ್ದ ಜಾಲಿವುಡ್ ಸ್ಟುಡಿಯೋಸ್ ಬಂದ್ ಮಾಡಲಾಗಿದೆ. ಜಲ ಮಾಲಿನ್ಯ ಮತ್ತು ಅನಧಿಕೃತ ಕಾರ್ಯನಿರ್ವಹಣೆ ಆರೋಪದ ಮೇಲೆ ನಟ ಸುದೀಪ್ ನಡೆಸಿ ಕೊಡುವ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ ಗೆ ಜಿಲ್ಲಾಡಳಿತ ಮಂಗಳವಾರ ಸಂಜೆ ಬೀಗ ಹಾಕಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಡಿ.ಕೆ. ಶಿವಕುಮಾರ್ ಕಲಾವಿದರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ ಎಂದು ಆರೋಪಿಸಿದೆ.
ಈ ಹಿಂದೆ ಡಿ.ಕೆ. ಶಿವಕುಮಾರ್ ಕಾರ್ಯಕ್ರಮವೊಂದರಲ್ಲಿ ಕಲಾವಿದರ ಕುರಿತಂತೆ ಯಾರ್ಯಾರಿಗೆ ನಟ್ಟು ಬೋಲ್ಟು ಟೈಟು ಮಾಡಬೇಕಿದೆ ಎಂದು ಗೊತ್ತಿದೆ ಎಂದು ಹೇಳಿದ್ದರು. ಇದನ್ನು ಪ್ರಸ್ತಾಪಿಸಿ ಜೆಡಿಎಸ್ ಆರೋಪ ಮಾಡಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ @DKShivakumar #BigBossKannada pic.twitter.com/IeGhRkhlXC
— Janata Dal Secular (@JanataDal_S) October 7, 2025