ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ: ‘ಕಾಂತಾರ 1’ ನೋಡಿದ ಕೇಂದ್ರ ಸಚಿವ HDK

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ದೆಹಲಿಯಲ್ಲಿ ‘ಕಾಂತಾರ ಚಾಪ್ಟರ್ 1’ ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಕಾಂತಾರ ಚಾಪ್ಟರ್ 1’ ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನೈಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವ ಪರಂಪರೆಯ ವಿರಾಟ್ ಅನಾವರಣ. ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಾನು, ನನ್ನ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕಾಂತಾರ ಚಾಪ್ಟರ್ 1 ಚಿತ್ರ ವೀಕ್ಷಿಸಿದೆವು.

ನಿರ್ದೇಶಕ ರಿಷಭ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ಹೊಂಬಾಳೆ ಫಿಲಂಸ್ ಮತ್ತವರ ತಂಡದ ಪ್ರಯತ್ನಕ್ಕೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮಿಂದ ಇನ್ನಷ್ಟು ಅತ್ಯುತ್ತಮ ಚಿತ್ರಗಳು ಮೂಡಿಬರಲಿ ಹಾಗೂ ಕನ್ನಡ ಚಿತ್ರರಂಗದಲ್ಲಿ ಇಂತಹ ಜಾಗತಿಕ ಮಟ್ಟದ ಚಿತ್ರಗಳು ಹೆಚ್ಚೆಚ್ಚು ಬರಲಿ ಎಂದು ಆಶಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read