2025-26 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ) ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್,ಸಿ ಮತ್ತು ಎಸ್.ಟಿ ರೂ,2.50 ಲಕ್ಷ ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ.1 ಲಕ್ಷ ಹೊಂದಿರುವ ವಿದ್ಯಾರ್ಥಿಗಳು ಅಕ್ಟೋಬರ 14, 2025 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08362447961 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.