HomeLatest News'ಭಾಗ್ಯಲಕ್ಷ್ಮಿ' ಬಾಂಡ್ ಪಡೆದ ಫಲಾನುಭವಿಗಳಿಂದ ಅರ್ಜಿ ಆಹ್ವಾನ

‘ಭಾಗ್ಯಲಕ್ಷ್ಮಿ’ ಬಾಂಡ್ ಪಡೆದ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಂಡ್ ಪಡೆದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಾವತಿಸಲು ಉದ್ದೇಶಿಸಲಾಗಿದ್ದು, ಸಂಡೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2006-07ನೇ ಸಾಲಿನಲ್ಲಿ ಜನಿಸಿ, 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಡೆಯಲು ಅರ್ಹರಾಗಿರುತ್ತಾರೆ. ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಸಂಡೂರು ಪಟ್ಟಣದ ಕೆಹೆಚ್ಬಿ ಕಾಲೋನಿಯ ಸ್ತ್ರೀಶಕ್ತಿ ಶಕ್ತಿ ಭವನದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಂಡೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular