ವಿಜಯಪುರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಮತ್ತು ಆರೋಪಿತ ವಕೀಲನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಅ. 16ರಂದು ವಿಜಯಪುರ ಜಿಲ್ಲಾ ಕೇಂದ್ರ ಬಂದ್ ಗೆ ಕರೆ ನೀಡಲಾಗಿದೆ.
ಮಾಜಿ ಶಾಸಕ ಪ್ರೊ. ರಾಜು ಅಲಗೂರ ಸುದ್ದಿಗೋಷ್ಠಿಯಲ್ಲಿ ಬಗ್ಗೆ ಮಾಹಿತಿ ನೀಡಿದ್ದು, ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಈ ರೀತಿ ಘಟನೆ ನಡೆದಿರುವುದು ಸಂವಿಧಾನದ ಮೇಲಿನ ದಾಳಿಯಾಗಿದೆ. ಇದನ್ನು ಸಹಿಸಲು ಮತ್ತು ಕ್ಷಮಿಸಲು ಸಾಧ್ಯವಿಲ್ಲ. ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಬಂದ್ ಗೆ ನಿರ್ಧಾರ ಕೈಗೊಳ್ಳಲಾಗಿದೆ. ಅ. 16ರಂದು ಮಾರುಕಟ್ಟೆ, ಬಸ್ ಸಂಚಾರ ಸೇರಿ ಇತರ ಚಟುವಟಿಕೆ ಸ್ಥಗಿತವಾಗಲಿವೆ. ವೈದ್ಯಕೀಯ ಸೇವೆ ಇರುತ್ತದೆ ಎಂದು ಹೇಳಿದ್ದಾರೆ.