ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಲಾಗಿದೆ.
ಸಿಸಿ, ಒಸಿ ಪಡೆಯದೆ ಮನೆ ಕಟ್ಟಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. 1,200 ಚ.ಮೀ.ನಲ್ಲಿ ಕಟ್ಟಿರುವ ಮನೆಗೆ ವಿದ್ಯುತ್, ನೀರಿನ ಸಂಪರ್ಕ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. 1,200 ಚ.ಮೀ.ನಲ್ಲಿ ಕಟ್ಟಿರುವ ಮನೆಗಳಿಗೆ ಮಾತ್ರ ನೀಡಲಾಗುವುದು. 30X 40 ಸೈಟ್ ನಲ್ಲಿ ಕಟ್ಟಿರುವ ಮನೆಗಳಿಗೆ ಅನುಮತಿ ನೀಡುವ ಸಾಧ್ಯತೆ ಇದೆ.
ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. 1200 ಚ.ಮೀ.ಗಿಂತ ಹೆಚ್ಚು ವಿಸ್ತೀರ್ಣದ ಕಟ್ಟಡಗಳಿಗೆ ಸುಗ್ರೀವಾಜ್ಞೆಯ ಮೂಲಕ ಅನುಮತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು. ಕಾನೂನು ಅಡೆತಡೆಗಳ ಬಗ್ಗೆಯೂ ಇಂದಿನ ಸಭೆಯಲ್ಲಿ ಸಮಾಲೋಚನೆ ನಡೆದಿದೆ.
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, 30X 40 ರವರೆಗೆ ಅನುಮತಿ ಕೊಡಲು ತೀರ್ಮಾನ ಮಾಡಿದ್ದೇವೆ. 30X40 ಸೈಟ್ ನಲ್ಲಿ ಮನೆ ಕಟ್ಟಿರುವವರ ರಕ್ಷಣೆಗೆ ತೀರ್ಮಾನ ಕೈಗೊಂಡಿದ್ದೇವೆ. ಕಾನೂನಿನಲ್ಲಿರುವ ಅಡೆತಡೆಗಳ ನಿವಾರಿಸಲು ಚರ್ಚೆ ನಡೆಸಲಾಗಿದೆ. 30X40 ಅಂದರೆ 1,200 ಚ. ಮೀಟರ್ ಗೆ ಅನುಮತಿ ನೀಡಲಾಗಿದೆ. ಆದರೆ ಇಂಧನ ಇಲಾಖೆಗೆ ಅನುಷ್ಠಾನಗೊಳಿಸಲು ಅಡೆ-ತಡೆಗಳು ಇವೆ. ಅದನ್ನು ನಿವಾರಿಸಿ ಅನುಮತಿ ನೀಡಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಇಂದು ನನ್ನ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು.
— Siddaramaiah (@siddaramaiah) October 8, 2025
ಈ ವೇಳೆ ಉಪ ಮುಖ್ಯಮಂತ್ರಿಗಳಾದ @DKShivakumar , ಸಚಿವರಾದ @HKPatilINC , @thekjgeorge,… pic.twitter.com/iLrWeZxVeE