ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಈ ಕುರಿತಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
ಹೆಚ್.ಡಿ. ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಜೆಡಿಎಸ್ ವರಿಷ್ಠರಾದ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಅನಾರೋಗ್ಯದ ಕಾರಣ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಳಿ, ಜ್ವರ, ಸೋಂಕಿನ ಕಾರಣ ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಿ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು. ಚಿಕಿತ್ಸೆ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಚಿಕಿತ್ಸೆ ಮುಂದುವರಿಸಲಾಗಿದೆ.