ಗದಗ: ಸಾರಿಗೆಯ ಸಂಸ್ಥೆಯ ಕಂಡಕ್ಟರ್ ಚಾಕುವಿನಿಂದ ಇರಿದು ಪತ್ನಿ ಕೊಲೆ ಮಾಡಿದ ಘಟನೆ ಗದಗ ತಾಲೂಕಿನ ಬಿಂಕದಕಟ್ಟೆ ಗ್ರಾಮದಲ್ಲಿ ನಡೆದಿದೆ.
ಯಲ್ಲಮ್ಮ ಅಲಿಯಾಸ್ ಸ್ವಾತಿ ಕೊಲೆಯಾದ ಮಹಿಳೆ. ಮೂವರು ಮಕ್ಕಳಿದ್ದರೂ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ ಕಂಡಕ್ಟರ್ ರಮೇಶ್ ನರಗುಂದ ಕೊಲೆ ಮಾಡಿದ್ದಾನೆ. ಬೀಸುವ ಕಲ್ಲು ಎತ್ತಿ ಹಾಕಿ ಬಳಿಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪತ್ನಿ ಯಲ್ಲಮ್ಮ ಅಲಿಯಾಸ್ ಸ್ವಾತಿಯನ್ನು ರಮೇಶ್ ನರಗುಂದ ಕೊಲೆ ಮಾಡಿದ್ದಾನೆ.
ಗದಗ ಬಸ್ ಡಿಪೋದಲ್ಲಿ ಆರೋಪಿ ರಮೇಶ್ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮನೆಯಲ್ಲಿ ಪತ್ನಿಯನ್ನು ಕೊಂದು ಕೈಯಲ್ಲಿ ಚಾಕು ಹಿಡಿದುಕೊಂಡು ಸ್ಥಳೀಯರಿಗೆ ಬೆದರಿಕೆ ಹಾಕಿದ್ದಾನೆ. ಹತ್ತಿರ ಬಂದರೆ ಚಾಕುವಿನಿಂದ ಚುಚ್ಚುವುದಾಗಿ ಸ್ಥಳೀಯರಿಗೆ ಬೆದರಿಕೆ ಹಾಕಿದ್ದಾನೆ. ಮಾಹಿತಿ ಪಡೆದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ರಮೇಶನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗದಗ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.