ಬೆಂಗಳೂರು: ದೀಪಾವಳಿ ಹಬ್ಬಕ್ಕೆ ರಾತ್ರಿ 8ರಿಂದ 10 ಗಂಟೆವರೆಗೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ,
ಸುಪ್ರೀಂ ಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಲಾಗಿದೆ.