ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಪೂಜಿನಗರದ ಮನೆಯಲ್ಲಿ ಚಾಲಕ ಶರಣಗೌಡ ರಾಮಗೋಳ್(33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಇಬ್ಬರು ಮಕ್ಕಳೊಂದಿಗೆ ನೆಲೆಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 5 ವರ್ಷಗಳಿಂದ ಆರ್. ಅಶೋಕ್ ಬೆಂಗಾವಲು ವಾಹನ ಚಾಲಕರಾಗಿದ್ದರು. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.