ಬೆಂಗಳೂರು: ‘ಬಿಗ್ ಬಾಸ್’ ಮನೆಗೆ ಎಲ್ಲಾ 17 ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ. ರಾಮನಗರ ತಾಲೂಕಿನ ಬಿಡದಿ ಸಮೀಪ ಈಗಲ್ಟನ್ ರೆಸಾರ್ಟ್ ನಿಂದ ಮುಂಜಾನೆ 4 ಗಂಟೆಗೆ ಎಲ್ಲಾ ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ.
ಕಾರ್ ಗಳ ಗಾಜಿಗೆ ಕಪ್ಪು ಬಟ್ಟೆ ಸುತ್ತಿ ಯಾರಿಗೂ ಕಾಣದಂತೆ ಎಲ್ಲಾ ಸ್ಪರ್ಧಿಗಳನ್ನು ಕರೆತರಲಾಗಿದೆ. ‘ಬಿಗ್ ಬಾಸ್’ ಸಿಬ್ಬಂದಿ ಎಲ್ಲಾ ಸ್ಪರ್ಧಿಗಳನ್ನು ಶಿಫ್ಟ್ ಮಾಡಿದ್ದು, ಚಿತ್ರೀಕರಣ ಆರಂಭವಾಗಿದೆ.
ಜಲ ಮಾಲಿನ್ಯ ಮತ್ತು ಅನಧಿಕೃತವಾಗಿ ಕಾರ್ಯನಿರ್ವಹಣೆ ಆರೋಪದ ಮೇಲೆ ‘ಬಿಗ್ ಬಾಸ್’ ಶೋ ನಡೆಯುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಗೆ ಮಂಗಳವಾರ ಸಂಜೆ ಬೀಗ ಹಾಕಲಾಗಿತ್ತು. ಇದರಿಂದಾಗಿ ಸ್ಪರ್ಧಿಗಳನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಜಿಲ್ಲಾಡಳಿತ ಬೀಗ ತೆಗೆಸಿದ್ದು, ಸ್ಪರ್ಧಿಗಳನ್ನು ‘ಬಿಗ್ ಬಾಸ್’ ಮನೆಗೆ ಸ್ಥಳಾಂತರಿಸಲಾಗಿದೆ.