HomeLatest Newsಬಂಗಾಳ ಕೊಲ್ಲಿಯಲ್ಲಿ ಮಳೆ ಮಾರುತ ಚುರುಕು: ಬೆಂಗಳೂರು ಸೇರಿ 9 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ಮಳೆ ಮಾರುತ ಚುರುಕು: ಬೆಂಗಳೂರು ಸೇರಿ 9 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕಾಗಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ ಕೊನೆಯ ವಾರ ಪಶ್ಚಿಮ ಕರಾವಳಿ ಪ್ರವೇಶಿಸಿದ್ದ ಮುಂಗಾರು ಮಾರುತಗಳು ವಾಪಸ್ ಆಗುತ್ತಿವೆ. ಹೀಗಾಗಿ ಒಡಿಶಾದಿಂದ ರಾಜ್ಯದವರೆಗೆ ಮಳೆ ಮಾರುತಗಳು ವ್ಯಾಪಕವಾಗಿರುವ ಪರಿಣಾಮ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಭಾರಿ ಮಳೆಯಾಗುವ ಸಂಭವವಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಶುಕ್ರವಾರ ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular