ರಾಜ್ಯ ಸರ್ಕಾರದಿಂದ ‘ಬ್ರಾಹ್ಮಣ’ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ , ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಬ್ರಾಹ್ಮಣ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಿದ್ದು, ಸಾಲ , ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ಅರ್ಹತೆಗಳು
ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಅರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (EWS ಪ್ರಮಾಣ ಪತ್ರ) ಹೊಂದಿರಬೇಕು.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರ ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು.

ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಮಹಿಳೆಯರಿಗೆ 33% ಮೀಸಲಾತಿಯನ್ನು ನೀಡಲಾಗುವುದು.
ದಿವ್ಯಾಂಗರಿಗೆ ಶೇ.5% ಮೀಸಲಾತಿ ನೀಡಲಾಗುವುದು.

ಅರ್ಜಿದಾರರ ಅಧಾರ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಸೀಡ್ ಆಗಿರಬೇಕು.
Website: www.ksbdb.Karnataka.gov.in

ಯೋಜನೆಯ ಉದ್ದೇಶ

ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ-ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1.00 ಲಕ್ಷ ಹಾಗೂ ಗರಿಷ್ಠ ರೂ.2.00 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುವುದು.

ಸಾಮಾನ್ಯ ಅರ್ಹತೆಗಳು:

  1. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (EWS ಪ್ರಮಾಣ ಪತ್ರ) ಹೊಂದಿರಬೇಕು
  2. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು
  3. ಅರ್ಜಿದಾರರು 18 ರಿಂದ 65 ವರ್ಷದ ಒಳಗಿನವರಾಗಿರಬೇಕು
  4. ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದ
  5. ಮಹಿಳೆಯರಿಗೆ 33%, ವಿಶೇಷಚೇತನರಿಗೆ ಶೇ 5% ಮೀಸಲಾತಿಯನ್ನು ನೀಡಲಾಗುವುದು
  6. ಅರ್ಜಿದಾರರ ಆಧಾರ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಸೀಡ್ ಆಗಿರಬೇಕು
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read