ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದಾರೆ.
ಅಕ್ಟೋಬರ್ 13ರಂದು ಸಿಎಂ ಸಿದ್ದರಾಮಯ್ಯ ಸಂಪುಟದ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದಾರೆ. ಕ್ಯಾಬಿನೇಟ್ ಪುನಾರಚನೆಗೂ ಮುನ್ನ ಸಹೋದ್ಯೋಗಿಗಳಿಗೆ ಔತಣಕೂಟ ಏರ್ಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಸಚಿವ ಸಂಪುಟ ಪುನಾರಚನೆ ಬಹುತೇಕ ಖಚಿತವಾಗಿದ್ದು, 15 ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಹಾರ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವುದು ಪಕ್ಕಾ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ.