ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಬಹುತೇಕ ಖಚಿತವಾಗಿದೆ. ಬಿಹಾರ ಚುನಾವಣಾ ಫಲಿತಾಂಶದ ಬಳಿಕ ಸಚಿವ ಸಂಪುಟ ಪುನಾರಚನೆಯಾಗಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಈಗಾಗಲೇ ಮಾತುಕತೆ ನಡೆದಿದೆ.
ಸಚಿವ ಸಂಪುಟ ಪುನಾರಚನೆ ವಿಚಾರ ಎನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಔತಣಕೂಟ ಆಯೋಜಿಸಿದ್ದಾರೆ. ಸಂಪುಟ ಪುನಾರಚನೆಗೂ ಮುನ್ನ ಸಂಪುಟದ ಸಹೋದ್ಯೋಗಿಗಳಿಗಾಗಿ ಅಕ್ಟೋಬರ್ 13ರಂದು ಔತಣಕೂಟ ಏರ್ಪಾಟು ಮಾಡಲಾಗಿದೆ.
ಬಿಹಾರ ಚುನಾವಣೆ ಬಳಿಕ ಸಂಪುಟ ಪುನಾರಚನೆಯಾಗಲಿದ್ದು, 15 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸ ತಂಡ ರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಶೇ.50ರಷ್ಟು ಸಂಪುಟ ಪುನಾರಚನೆ ಮೂಲ ಸಂದೇಶ ರವಾನಿಸುವ ನಿಟ್ಟಿನಲ್ಲಿ ಚರ್ಚೆಯಾಗಿದೆ. ದೊಡ್ಡಮಟ್ಟದಲ್ಲಿ ಸರ್ಜರಿ ನಡೆದರೆ ನಾಯಕತ್ವ ಬದಲಾವಣೆ ಇಲ್ಲಎಂಬ ಸಂದೇಶ ನೀಡಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೆ.ಸಿ.ವೇಣುಗೋಪಾಲ್ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.