HomeLatest NewsBREAKING: ಆರ್.ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ!

BREAKING: ಆರ್.ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ!

ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಪೂಜಿನಗರದಲ್ಲಿ ನಡೆದಿದೆ.

ಶರಣಪ್ಪ (33) ಆತ್ಮಹತ್ಯೆಗೆ ಶರಣಾದ ಬೆಂಗಾವಲು ವಾಹನ ಚಾಲಕ. ಬೆಂಗಳೂರಿನ ಬಾಪೂಜಿನಗರದ ಬಾಡಿಗೆ ಮನೆಯಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶರಣಪ್ಪ ಪತ್ನಿ ಶೈಲಶ್ರೀ ಮಾಗಡಿ ರಸ್ತೆಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದರು.

ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಶರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂಲತಃ ಕಲಬುರಗಿ ಜಿಲ್ಲೆಯವರಾದ ಶರಣಪ್ಪ ಕಳೆದ ಎರಡು ಮೂರು ವರ್ಷಗಳಿಂದ ಆರ್.ಅಶೋಕ್ ಅವರ ಬೆಂಗಾವಲು ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular