ಕಲಬುರಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶಾಕಾಪುರದಲ್ಲಿ ನಡೆದಿದೆ.
ಭಾಗ್ಯಶ್ರೀ (31) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಮನೆಯಿಂದ ಹೊರ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಮಹಿಳೆ ಇದೀಗ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೌಟುಂಬ್ಕ ಕಲಹದಿಂದ ನೊಂದು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತಪಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.