BIG NEWS: ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ; ನಡೆದದ್ದೇ ದಾರಿ ಎನ್ನುವಂತಾಗಿದೆ: ಸಂಸದ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ವಿಚಾರ ಹಾಗೂ ಬಿಗ್ ಬಾಸ್ ಶೋ ಕಾರ್ಯಕ್ರಮಕ್ಕೆ ಅಡ್ದಿಯಾದ ವಿಚಾರವಗಿ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬೊಮ್ಮಾಯಿ, ಬಿಗ್ ಬಾಸ್ ವಿಚಾರ ಆ ಸ್ಟುಡಿಯೊ ಮಾಲಕರು ಮತ್ತು ಅಧಿಕಾರಿಗಳ ನಡುವೆ ನಡೆಯುವುದು ಯಾವ ಕಾನೂನಿನ ಅಡಿಯಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದಕ್ಕೂ ಕಾನೂನು ಪ್ರಕಾರ ನಡೆಯುವ ಪದ್ದತಿ ಇದೆ. ಈ ಮಧ್ಯೆ ಅದಕ್ಕೆ ಡಿಸಿಎಂ ಅವರು ಹಿಂದೆ ಆಡಿದ ಮಾತು ಸೇರಿಸಿ ಕೆಲವರು ಹೇಳುತ್ತಿದ್ದಾರೆ. ಅದು ಮುಖ್ಯವಲ್ಲ. ಎಲ್ಲೊ ದಾರಿ ತಪ್ಪುತ್ತಿದೆ ಎನಿಸುತ್ತಿದೆ ಎಂದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ವ್ಯಾಪ್ತಿ ಏನು? ಬಂದ್ ಮಾಡುವ ಅಧಿಕಾರ ಇದೆಯಾ ಇಲ್ಲವಾ? ನೋಡಬೇಕು. ಒಂದು ಕಡೆ ಮನರಂಜನಾ ಉದ್ಯಮ ನಡೆಯಬೇಕು ಇನ್ನೊಂದೆಡೆ ಮಾಲಿನ್ಯವಾಗದಂತೆ ನೊಡಿಕೊಳ್ಳಬೇಕಿದೆ. ಎಷ್ಟು ದಿನದಿಂದ ಈ ಸಮಸ್ಯೆ ಇದೆ? ಈಗ್ಯಾಕೆ ಈ ಕ್ರಮ ಕೈಗೊಂಡಿದ್ದಾರೆ? ಎನ್ನುವ ಪ್ರಶ್ನೆ ಮೂಡುತ್ತದೆ. ಇಕೊ ಎಕನಾಮಿಕ್ಸ್ ಅಂತಾರೆ‌, ಆರ್ಥಿಕತೆಯೂ ನಡೆಯಬೇಕು, ಪರಿಸರವೂ ಉಳಿಯಬೇಕು. ಅದು ಈ ರಾಜ್ಯದಲ್ಲಿ ತಪ್ಪಿ ಹೋಗಿದೆ. ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ. ನಡೆದದ್ದೇ ದಾರಿ ಎನ್ನುವಂತಾಗಿದೆ. ಹಾಗೆ ಆದಾಗಲೇ ಈ ರೀತಿಯ ಘಟನೆಗಳು ನಡೆಯುತ್ತವೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅನುಮತಿ ಕೊಡೆಸಿ ಇದರಲ್ಲಿ ತಮ್ಮ ಪಾತ್ರ ಇಲ್ಲ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನ ಮಾಡಿದ್ದರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read