ಬೆಂಗಳೂರು: ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲಹಂಕ ನ್ಯೂಟೌನ್ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಬಿಲ್ಡಿಂಗ್ ನಲ್ಲಿದ್ದ ಲಾಡ್ಜ್ ನಲ್ಲಿ ಘಟನೆ ನಡೆದಿದೆ.
ಕಟ್ಟಡದಲ್ಲಿನ ಸಮೀಪದ ಬಿಲ್ಡಿಂಗ್ ನಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ಬೆಂಕಿ ಅವಘಡದಲ್ಲಿ ಯುವಕ, ಯುವತಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಯುವತಿ ಕಾವೇರಿ ಬಡಿಗೇರ್ ಹುನಗುಂದ ಮೂಲದವರು. ಯುವಕ ಗದಗ ಮೂಲದವನು ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಮದುವೆಗೆ ಒಪ್ಪದ ಕಾರಣ ಬೆಂಕಿ ಹಚ್ಚಿಕೊಂಡಿರುವ ಸಾಧ್ಯತೆ ಇದೆ. ಬೆಂಕಿ ಹಚ್ಚಿಕೊಂಡ ಬಳಿಕ ಕೂಗಾಡಿದ್ದು, ಲಾಡ್ಜ್ ಸಿಬ್ಬಂದಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಬಾಗಿಲು ಒಡೆದು ಒಳ ಹೋಗಿದ್ದು, ಬೆಂಕಿಯಿಂದ ಯುವಕ ಸಾವನ್ನಪ್ಪಿದ್ದು, ಹೊಗೆಯಿಂದ ಯುವತಿ ಮೃತಪಟ್ಟಿದ್ದಾರೆ. ಸದ್ಯ ಇಬ್ಬರ ಶವಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.