ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರು ಸೇರಿದಂತೆ ಇಡೀ ದೇಶದಲ್ಲಿ ಮೊದಲ ಬಾರಿಗೆ ಐಟಿ, ಬಿಟಿ, ಖಾಸಗಿ ಕಂಪನಿ, ಕೈಗಾರಿಕೆ, ಗಾರ್ಮೆಂಟ್ಸ್ ಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ತಿಂಗಳಿಗೆ ಒಂದು ದಿನದಂತೆ ವಾರ್ಷಿಕ 12 ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಋತುಚಕ್ರ ರಜೆ ನೀತಿ ಜಾರಿಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬಿಹಾರ, ಕೇರಳ, ಒಡಿಶಾ ರಾಜ್ಯಗಳಲ್ಲಿ ಋತುಚಕ್ರ ರಜೆ ನೀತಿ ಜಾರಿಯಲ್ಲಿದೆ. ಬಿಹಾರದಲ್ಲಿ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ಎರಡು ದಿನ ವೇತನ ಸಹಿತ ರಜೆ ನೀಡಲಾಗುವುದು. 1992 ರಲ್ಲಿ ಲಾಲು ಪ್ರಸಾದ್ ಯಾದವ್ ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆ ಜಾರಿಗೊಳಿಸಲಾಗಿದೆ. ಖಾಸಗಿ ಉದ್ಯೋಗಿಗಳಿಗೆ ರಜೆ ಇರುವುದಿಲ್ಲ.
ಕೇರಳದಲ್ಲಿ 2023ರಿಂದ ಐಟಿಐi ವಿದ್ಯಾರ್ಥಿನಿಯರಿಗೆ ತಿಂಗಳಲ್ಲಿ ಎರಡು ದಿನ ರಜೆ ನೀಡಲಾಗುತ್ತಿದೆ. ಒಡಿಶಾದಲ್ಲಿ 2024ರ ನವೆಂಬರ್ ನಿಂದ ಋತುಚಕ್ರ ರಜೆ ಜಾರಿಗೆ ಬಂದಿದ್ದು, ಸರ್ಕಾರಿ ನೌಕರರಿಗೆ ಮಾತ್ರ ಸೀಮಿತವಾಗಿದೆ. ಸಿಕ್ಕಿಂನಲ್ಲಿ ಹೈಕೋರ್ಟ್ ಸಿಬ್ಬಂದಿಗೆ ಮಾತ್ರ 2024 ರಿಂದ ಋತುಚಕ್ರ ರಜೆ ಜಾರಿಯಲ್ಲಿದೆ. ಕರ್ನಾಟಕದಲ್ಲಿ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ನೀತಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನಾಡಿನ ಲಕ್ಷಾಂತರ ಹೆಣ್ಣುಮಕ್ಕಳು, ಮಹಿಳೆಯರಿಗೆ ಋತುಚಕ್ರದ ಸಂದರ್ಭದಲ್ಲಿ ಕೆಲಸದ ಸ್ಥಳದಲ್ಲಿ ಎದುರಾಗುವ ಸವಾಲುಗಳು, ಅವರು ಅನುಭವಿಸುವ ಮಾನಸಿಕ ಹಾಗೂ ದೈಹಿಕ ನೋವು, ಸಂಕಟವನ್ನು ಅರಿತು ಈ ವೇಳೆ ಅವರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವ ತೀರ್ಮಾನವನ್ನು ನಮ್ಮ ಸರ್ಕಾರವು ಕೈಗೊಂಡಿದೆ.
— Siddaramaiah (@siddaramaiah) October 9, 2025
ಸರ್ಕಾರವು ಮಾನವೀಯ ಕಾಳಜಿಯನ್ನು, ತನ್ನ ಜನರ ಕಷ್ಟ… pic.twitter.com/Ob66PesfRd