BIG NEWS: ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಸೈಬರ್ ಭದ್ರತೆ ಬಲಪಡಿಸಲು ಹೊಸ ತಂತ್ರಾಂಶ ಅಳವಡಿಕೆ: ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು: ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದ ಸೈಬ‌ರ್ ಭದ್ರತೆ ಬಲಪಡಿಸಲು 38.33 ಕೋಟಿ ವೆಚ್ಚದಲ್ಲಿ ಹೊಸ ತಂತ್ರಾಂಶ ಅಳವಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

‘ಜಲಾನಯನ ಅಭಿವೃದ್ಧಿ ಘಟಕ – ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0’ ಯೋಜನೆಯಡಿ ರಾಜ್ಯದ 15 ತಾಲೂಕುಗಳ 39,413 ಹೆಕ್ಟೇರ್ ಪ್ರದೇಶದಲ್ಲಿ ₹90.07 ಕೋಟಿ ವೆಚ್ಚದಲ್ಲಿ ಹೆಚ್ಚುವರಿ 15 ಯೋಜನೆಗಳನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ

ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದ ಸೈಬ‌ರ್ ಭದ್ರತೆ ಬಲಪಡಿಸಲು 38.33 ಕೋಟಿ ವೆಚ್ಚದಲ್ಲಿ ಹೊಸ ತಂತ್ರಾಂಶ ಅಳವಡಿಕೆಗೆ ನಿರ್ಣಯ.

ನೋ೦ದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ₹405.55 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ತೀರ್ಮಾನ.

ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ 2025 ಅನ್ನು ಮುಂದಿನ ವಿಧಾನಮಂಡಲದಲ್ಲಿ ಮ೦ಡಿಸಲು ನಿರ್ಧಾರ.

ಮೈಸೂರಿನ ಸಿಪಿಸಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನವೀಕರಣ ಹಾಗೂ ಪೂರಕ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ₹70 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಹಾಗೂ ಚಿ೦ತಾಮಣಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನವೀಕರಣ ಮತ್ತು ಆಡಿಟೋರಿಯಂ ಕಾಮಗಾರಿಗಳನ್ನು ₹50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ನಿರ್ಧಾರ.

ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ‘ಇಂದಿರಾ ಆಹಾರ ಕಿಟ್‌ಗಳನ್ನು ವಿತರಿಸಲು ನಿರ್ಧಾರ.

ಆಯವ್ಯಯದಲ್ಲಿ ಘೋಷಿಸಿದಂತೆ ₹1,000 ಕೋಟಿ ವೆಚ್ಚದಲ್ಲಿ ಬೃಹತ್ ಸೇತುವೆಗಳ ನಿರ್ಮಾಣ ಮತ್ತು ₹1,000 ಕೋಟಿ ವೆಚ್ಚದಲ್ಲಿ ಪ್ರವಾಹದಿಂದ ಹಾನಿಗೀಡಾದ ಸೇತುವೆಗಳ ಪುನ‌ರ್ ನಿರ್ಮಾಣ ಹಾಗೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಾಲುಸಂಕಗಳ ನಿರ್ಮಾಣ ಮಾಡಲು ನಿರ್ಧಾರ.

ಬೀದರ್ ಜಿಲ್ಲೆಯ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಘೋಷಿಸಲು ನಿರ್ಣಯ.

ಸ್ವಾಯತ್ತ ಸಂಸ್ಥೆಯ ಸ್ಥಾನಮಾನದೊಂದಿಗೆ ಕನಕಪುರದ ವೈದ್ಯಕೀಯ ಕಾಲೇಜು ಅನ್ನು 150 ಎ೦ಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಆರಂಭಿಸಲು ಮತ್ತು ಅವಶ್ಯವಿರುವ ವೈದ್ಯಕೀಯ ಕಟ್ಟಡ, 300 ಹಾಸಿಗೆಗಳ ಬೋಧನಾ ಆಸ್ಪತ್ರೆ, ವಸತಿ ನಿಲಯಗಳು ಮತ್ತಿತರ ಕಾಮಗಾರಿಗಳನ್ನು ₹550 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read