ಜವಾಹರ ನವೋದಯ ವಿದ್ಯಾಲಯ, ಮಡಿಕೇರಿ ಇಲ್ಲಿಗೆ 2026-27ನೇ ಸಾಲಿನಲ್ಲಿ ಖಾಲಿ ಇರುವ 9 ಮತ್ತು 11 ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್, 21 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಪ್ರಸ್ತುತ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು 9ನೇ ತರಗತಿಗೂ ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು 11 ನೇ ತರಗತಿಗೂ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ಇದರ ಲಾಭವನ್ನು ಪಡೆದುಕೊಳ್ಳಬೇಕೆಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ಕೋರಿದ್ದಾರೆ.
ಆನ್‍ಲೈನ್ ಅರ್ಜಿ ಸಲ್ಲಿಸಲು 9 ನೇ ತರಗತಿಗೆ https://cbsei tms.nic.in/2025/nvsix_9 ಮತ್ತು 11 ನೇ ತರಗತಿಗೆ https://cbseitms.nic.in/2025/nvsxi_11 ನ್ನು ಹಾಗೂ ಹೆಚ್ಚಿನ ಮಾಹಿತಿಗೆ ನವೋದಯ ಶಾಲೆಯ ದೂ.ಸಂ. 9481426184, 9380802179 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ತಿಳಿಸಿದ್ದಾರೆ.
