ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ ನಲ್ಲಿ ಮುಷ್ಕರ ನಡೆಸಲು ನಿರ್ಧರಿಸಿದ್ದ ಸಾರಿಗೆ ನೌಕರರಿಗೆ ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಆದರೆ ಈವರೆಗೂ ರಾಜ್ಯ ಸರ್ಕಾರ ನೌಕರ ಯಾವುದೇ ಬೇಡಿಕೆ ಈಡೇರಿಸಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ.
ನಾಲ್ಕು ಸಾರಿಗೆ ನಿಗಮಗಳ ನೌಕರರು, ಸಿಬ್ಬಂದಿಗಳು ಮೊದಲ ಹಂತದಲ್ಲಿ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹದ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ಧತೆ ನಡೆಸಿದದರೆ ಎಂದು ತಿಳಿದುಬಂದಿದೆ.
ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ, ಎನ್ ಡಬ್ಲ್ಯೂ ಕೆ.ಎಸ್.ಆರ್.ಟಿ.ಸಿ. ಕೆ.ಕೆ.ಆರ್.ಟಿ.ಸಿ ಸೇರಿದಂತೆ ನಾಲ್ಕು ನಿಗಮಗಳು ಹೋರಾಅಟಕ್ಕೆ ಸಿದ್ಧತೆ ನಡೆಸಿವೆ. ಮೊದಲ ಹಂತದಲ್ಲಿ ಅಕ್ಟೋಬರ್ 15ರಿಂದ 19ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಸಾರುಗೆ ಬಸ್ ವ್ಯವಸ್ಥೆ ರಾಜ್ಯಾದ್ಯಂತ ವ್ಯತ್ಯಯವಾಗುವ ಸಾಧ್ಯತೆ ದಟ್ಟವಾಗಿದೆ.
38 ತಿಂಗಳ ಬಾಕಿ ಬಿಡುಗಡೆ, ವೇತನ ಪರೀಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.