ಬೆಂಗಳೂರು : ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಗಲಗುಂಟೆಯ ಭುವನೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. 5 ವರ್ಷದ ಪುತ್ರಿ ಹಾಗೂ 1.5 ವರ್ಷದ ಪುತ್ರನನ್ನು ಕೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಯಚೂರು ಮೂಲದ ವಿಜಯಲಕ್ಷ್ಮಿ ಮಕ್ಕಳನ್ನು ಕೊಂದು ಸೂಸೈಡ್ ಮಾಡಿಕೊಂಡಿದ್ದು, ಸಹೋದರಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆ ವಿಜಯಲಕ್ಷ್ಮಿ ಪತಿ ಖಾಸಗಿ ಮಾಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.