ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ಪಿಟಿಐ ( ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ) ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಕೊಡಂಬಾಕ್ಕಂನಲ್ಲಿರುವ ಪಿಟಿಐ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಕಚೇರಿಯಲ್ಲಿ ತಪಾಸಣೆ ನಡೆಸಿದ್ದಾರೆ. ಕಚೇರಿಯಲ್ಲಿರುವ ಸಿಬ್ಬಂದಿಗಳನ್ನು ಹೊರಕಳುಹಿಸಿ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಬಾಂಬ್ ಬೆದರಿಕೆ ಮೂಲದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಿಲ್ಲ ಎಂದು ತಿಳಿದುಬಂದಿದೆ.