ಉಡುಪಿ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ,ರಾಘವೇಂದ್ರ ಅವರ ನೇಮಕಾತಿಯನ್ನು ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾ ಪೋಕ್ಸೋ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜ ವೈ.ಟಿ.ರಾಘವೇಂದ್ರಅವರನ್ನು ಕರ್ತವ್ಯ ಲೋಪ ಆರೋಪದಲ್ಲಿ ಅವರ ನೇಮಕಾತಿಯನ್ನು ರದ್ದು ಮಾಡಲಾಗಿದೆ.
ನ್ಯಾಯಾಲಯಕ್ಕೆ ಮಹೈತಿ ನೀಡದೇ ಹಾಗೂ ಪರ್ಯಾಯ ವ್ಯವಸ್ಥೆಯನ್ನೂ ಮಾಡದೇ ಕಲಾಪದಂದು ನ್ಯಾಯಾಲಯಕ್ಕೆ ಹಾಜರಾಗದೇ ಕರ್ತವ್ಯಕ್ಕೆ ಗೈರಾಗಿದ್ದರು. ಅಲ್ಲದೇ ಉಡುಪಿ ಮಹಿಳಾ ಠಾಣೆಯಲ್ಲಿ ವೈ.ಟಿ.ರಾಘವೇಂದ್ರ ವಿರುದ್ಧ ಜಾತಿ ನಿಂದನೆ ಕೇಸ್ ಕೂಡ ದಾಖಲಾಗಿದೆ. ಅಷ್ಟೇ ಅಲ್ಲ ವಿಶೇಷ ಸರ್ಕಾರಿ ಅಭಿಯೋಜಕರಾಗಿದ್ದ ರಾಘವೇಂದ್ರ ಅವರು ಬೇರೆ ನ್ಯಾಯಾಲಯಗಳಲ್ಲಿ ಹಾಗೂ ಇತರ ಪ್ರಕರಣಗಳಲ್ಲಿ ಕಕ್ಷಿದಾರರನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಮಧು ಎಂಬುವವರು ದಾಖಲೆ ಸಮೇತ ದೂರು ನೀಡಿದ್ದರು ಈ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕ ಹುದ್ದೆಯಿಂದ ನೇಮಕಾತಿ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.