ಗಮನಿಸಿ : 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 08 (ಕರ್ನಾಟಕ ವಾರ್ತೆ) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೆಂಗಳೂರು ನಗರ ಜಿಲ್ಲೆ ವತಿಯಿಂದ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.

ಆಸಕ್ತರು ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಛೇರಿ, ಜಿಟಿಟಿಸಿ ಕಟ್ಟಡ, ರಾಜಾಜಿನಗರ, ಕೈಗಾರಿಕಾ ವಸಹತು, ಕಾರ್ಡ್ ರಸ್ತೆ, ಬೆಂಗಳೂರು-10 ಇಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆ 9008175702 , 9448413948 ಮುಖಾಂತರ ಅಕ್ಟೋಬರ್ 14, 2025 ರೊಳಗೆ ನೋಂದಾಯಿಸಿಕೊಳ್ಳಬಹುದು .

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 7760145784 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read