HomeLatest NewsBREAKING : ಸ್ಯಾಂಡಲ್'ವುಡ್ ಹಿರಿಯ ಹಾಸ್ಯನಟ ಉಮೇಶ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು.!

BREAKING : ಸ್ಯಾಂಡಲ್’ವುಡ್ ಹಿರಿಯ ಹಾಸ್ಯನಟ ಉಮೇಶ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು.!

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯಹಾಸ್ಯನಟ ಉಮೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಉಮೇಶ್ ಅವರು ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಸ್ಥಿತಿ ಗಂಭೀರವಾದ ಹಿನ್ನೆಲೆ ಅವರನ್ನು ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ .

ಎಂ. ಎಸ್ ಉಮೇಶ್ ಮೈಸೂರು ಶ್ರೀಕಂಠಯ್ಯ ಉಮೇಶ್ , MS ಉಮೇಶ್ ಅಥವಾ ಸರಳವಾಗಿ ಉಮೇಶ್ ಎಂದು ಪ್ರಸಿದ್ಧರಾಗಿದ್ದಾರೆ, ಅವರು ಆರು ದಶಕಗಳ ಕಾಲ ವೃತ್ತಿಜೀವನವನ್ನು ಹೊಂದಿರುವ ಭಾರತೀಯ ಕನ್ನಡ ಸಿನಿಮಾ ನಟರಾಗಿದ್ದಾರೆ. ಅವರು 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಉಮೇಶ್ ತಮ್ಮ ವಿಶಿಷ್ಟ ಸಂಭಾಷಣೆ, ಮುಖಭಾವ ಮತ್ತು ಹಾಸ್ಯ ಸಮಯಪ್ರಜ್ಞೆಗೆ ಹೆಸರುವಾಸಿಯಾಗಿದ್ದಾರೆ. ೧೯೯೦ ರಲ್ಲಿ ಬಿಡುಗಡೆಯಾದ ಅನಂತ್ ನಾಗ್ ನಟಿಸಿದ ಗೋಲ್ಮಾಲ್ ರಾಧಾಕೃಷ್ಣ ಹಾಸ್ಯ ಚಿತ್ರದಲ್ಲಿ ಉಮೇಶ್ ಅವರ “ಸೀತಾಪತಿ” ಪಾತ್ರವು ಕನ್ನಡ ಚಿತ್ರರಂಗದ ಅತ್ಯುತ್ತಮ ಹಾಸ್ಯ ಪಾತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಅವರ “ಅಪಾರ್ಥ ಮಾಡ್ಕೊಂಡ್ಬಿಟ್ರೋ ಎನೋ” ಡೈಲಾಗ್ ಜನಸಾಮಾನ್ಯರಲ್ಲಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular