HomeLatest NewsBREAKING: ಅಬ್ದುಲ್ ರಹೀಮಾನ್ ಹತ್ಯೆ ಕೇಸ್: ಪ್ರಮುಖ ಆರೋಪಿ ಭರತ್ ಕುಮ್ಡೇಲು ಕೋರ್ಟ್ ಗೆ ಸರೆಂಡರ್

BREAKING: ಅಬ್ದುಲ್ ರಹೀಮಾನ್ ಹತ್ಯೆ ಕೇಸ್: ಪ್ರಮುಖ ಆರೋಪಿ ಭರತ್ ಕುಮ್ಡೇಲು ಕೋರ್ಟ್ ಗೆ ಸರೆಂಡರ್

ಮಂಗಳೂರು: ಬಂಟ್ವಾಳದ ಕೊಳಮಜಲು ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಭರತ್ ಕುಮ್ಡೇಲು ಕೋರ್ಟ್ ಗೆ ಶರಣಾಗಿದ್ದಾನೆ.

ಆರೋಪಿ ಭರತ್ ಕುಮ್ಡೇಲು ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಈಗ ವಾರೆಂಟ್ ಹಾಗೂ ಕೋಕಾ ಕಾಯ್ದೆ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಮಂಗಳೂರು ನ್ಯಾಯಾಲಯಕ್ಕೆ ಬಂದು ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 27ರಂದು ಅಬ್ದುಲ್ ರಹಿಮಾನ್ ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್., ಶಿವಪ್ರಸಾದ್ ತುಂಬೆ, ಪ್ರದೀಪ , ಶಾಹಿತ್, ಸಚಿನ್ ರೊಟ್ಟಿಗುಡ್ಡೆ, ರಂಜಿತ್ ಎಂಬವರನ್ನು ಬಂಧಿಸಿದ್ದರು. ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಪುದು ಗ್ರಾಮದ ಭರತ್ ರಾಜ್ ಯಾನೆ ಭರತ್ ಕುಮ್ಡೇಲು (29) ಎಂಬಾತ ತಲೆ ಮರೆಸಿಕೊಂಡಿದ್ದ. ಇದೀಗ ಕೋರ್ಟ್ ಗೆ ಶರಣಾಗತನಾಗಿದ್ದಾನೆ ಎಂದು ತಿಳಿದುಬಂದಿಇದೆ.

For Latest News Updates, Join Our Whatsapp Community🚩
RELATED ARTICLES

Most Popular