ಬೆಂಗಳೂರು: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಉಂಟಾದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮನರುಲ್ ಸೇಟು, ಜಾವಿದ್ ಅಲಿ, ತಜಬುಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಕ್ಟೋಬರ್ 7ರಂದು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಭೀಮನಹಳ್ಳಿ ಸಮೀಪ ಶೆಡ್ ನಲ್ಲಿ ಘಟನೆ ನಡೆದಿತ್ತು. ಪಶ್ಚಿಮ ಬಂಗಾಳ ಮೂಲದ 7 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಇಂದು ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.