ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವಧಿ ಅ. 18 ರವರೆಗೆ ವಿಸ್ತರಣೆ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಿಂದ ಅ.7 ರವರೆಗೆ ನಿಗದಿಪಡಿಸಲಾಗಿರುತ್ತದೆ. ಸದರಿ ಸಮೀಕ್ಷೆಯ ಕಾರ್ಯವನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಅವಶ್ಯಕತೆ ಇರುವುದರಿಂದ ಸದರಿ ದಿನಾಂಕವನ್ನು ಅ.18 ರವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಹಾಸನ ಜಿಲ್ಲೆಯು ಶೇ.94.53 ರಷ್ಟು ಪ್ರಗತಿಯನ್ನು ಸಾಧಿಸಿದ್ದು, ಸಮೀಕ್ಷೆಯು ಮುಕ್ತಾಯದ ಹಂತದಲ್ಲಿರುತ್ತದೆ.

ಆದ್ದರಿಂದ, ಹಾಸನ ಜಿಲ್ಲೆಯ ಸಾರ್ವಜನಿಕರು ಯಾವುದಾದರೂ ಮನೆ ಈವರೆಗೂ ಸಮೀಕ್ಷೆಯಾಗದೇ ಇದ್ದಲ್ಲಿ ಮತ್ತು ಸ್ವಯಂ ಪ್ರೇರಿತವಾಗಿ ಸಮೀಕ್ಷೆಯನ್ನು Online Website: https://kscbcselfdeclaration.karnataka.gov.in ಮೂಲಕ ಮಾಡಲು ಅಥವಾ ಈ ಕೆಳಕಾಣಿಸಿದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಥವಾ ಜಿಲ್ಲಾ ಮಟ್ಟದ ಸಹಾಯವಾಣಿಯನ್ನು ಸಂಪರ್ಕಿಸಲು ಕೋರಲಾಗಿದೆ. ತಾವು ಸಹಾಯುವಾಣಿಯನ್ನು ಸಂಪರ್ಕಿಸಿದ ನಂತರ ನಮ್ಮ ಸಮೀಕ್ಷೆದಾರರು ತಮ್ಮ ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.

ಬೆಳಿಗ್ಗೆ 10 ರಿಂದ ರಾತ್ರಿ 6 ರವರೆಗೆ ಜಿಲ್ಲಾ ಮಟ್ಟದ ಸಹಾಯವಾಣಿ ಕೇಂದ್ರ, ಸಹಾಯವಾಣಿ ಸಂಖ್ಯೆ 08172-295108, ಜಿಲ್ಲಾ ಅಧಿಕಾರಿಗಳ ಕಚÉÃರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಸನ.

ತಾಲ್ಲೂಕು ಮಟ್ಟದ ಸಹಾಯವಾಣಿ ಕೇಂದ್ರ ಸಮಯ ಬೆ.10 ರಿಂದ ಸಂಜೆ 06 ರವರೆಗೆ ಆಲೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆಲೂರು 9164202646, 9449665574, ಅರಕಲಗೂಡು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅರಕಲಗೂಡು 7019024647, 7795663637, ಅರಸೀಕೆರೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅರಸೀಕೆರೆ 8105285649, 8618981820, ಬೇಲೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೇಲೂರು 08177-222082, 9535358837, ಚನ್ನರಾಯಪಟ್ಟಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಚನ್ನರಾಯಪಟ್ಟಣ 08176-295803, 9448661732, ಹಾಸನ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಸನ 08172-295391, ಹೊಳೆನರಸೀಪುರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹೊಳೆನರಸೀಪುರ 9901436202, 9916155671, ಸಕಲೇಶಪುರ. ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಕಲೇಶಪುರ 829673190, 9449665574 ಸಹಾಯವಾಣಿಯನ್ನು ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read