ಹಾವೇರಿ: ಚಿರತೆ ದಾಳಿಗೆ ಓರ್ವ ರೈತ ಬಲಿಯಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ.
ರಾತ್ರಿ ರೈತ ಸಹೋದರರ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಲ್ಲಿ ಕಿರಿಯ ಸಹೋದರ ವೀರೇಶ್ ಬಳಗಾವಿ(28) ಸಾವನ್ನಪ್ಪಿದ್ದಾರೆ. ಹಿರಿಯ ಸಹೋದರ ಗಣೇಶ ಬಳಗಾವಿ(32) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರತೆ ದಾಳಿಯಿಂದ ಗ್ರಾಮದಲ್ಲಿ ಆತಂಕ ಮೂಡಿದ್ದು, ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.