HomeLatest Newsಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್, ಕೆಂಪು -ನೀಲಿ ಬಣ್ಣದ ಬೀಕನ್ ಗಳ ಖಾಸಗಿ ಬಳಕೆ, ತುರ್ತು ವಾಹನದ ಸೌಂಡ್ ನಿಷೇಧಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಕಾನೂನು ಬಾಹಿರ ಎಲ್ಇಡಿ ಲೈಟ್ ಗಳು ರಸ್ತೆ ಅಪಘಾತಗಳನ್ನು ಹೆಚ್ಚಿಸುತ್ತಿವೆ. ತುರ್ತು ವಾಹನಗಳಿಗೆಂದು ಇರುವ ಕೆಂಪು- ನೀಲಿ ಬೀಕನ್ ಗಳನ್ನು ಖಾಸಗಿ ವಾಹನಗಳಲ್ಲಿ ಬಳಸಲಾಗುತ್ತಿದೆ. ಇದು ಜನರಿಗೆ ತಪ್ಪು ಸಂದೇಶ ನೀಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್, ಕೆಂಪು -ನೀಲಿ ಬಣ್ಣದ ಬೀಕನ್ ಗಳ ಬಳಕೆ ನಿಷೇಧಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ.

ತುರ್ತು ವಾಹನಗಳ ಎಚ್ಚರಿಕೆ ಶಬ್ದವನ್ನು ಸಹ ಖಾಸಗಿ ವಾಹನದವರು ಬಳಕೆ ಮಾಡುತ್ತಿದ್ದಾರೆ. ಇದರಿಂದ ಸಂಚಾರ ವೇಳೆ ಅಪಘಾತ, ಪಾದಚಾರಿಗಳಿಗೆ ಗಾಬರಿಯಾಗುತ್ತಿದೆ ಎಂದು ಸುಪ್ರೀಂಕೋರ್ಟ್ ಕಿಡಿಕಾರಿದ್ದು, ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular