ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ.
ಜಿಲ್ಲೆಯ ತಿಕೋಟ ತಾಲೂಕಿನ ಭಾಗದಲ್ಲಿ ಭೂಕಂಪ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಭೂಕಂಪದ ಹಿನ್ನೆಲೆ ಜನರು ಆತಂಕಗೊಂಡಿದ್ದು, ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಕಳೆದ ಬಾರಿ ಕೂಡ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿತ್ತು.